ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವು, ಏಳು ಮಂದಿ ಅಸ್ವಸ್ಥ

ಮದ್ಯ ನಿಷೇಧಿಸಲಾಗಿರುವ ಬಿಹಾರದ ಸಿವಾನ್ ಜಿಲ್ಲೆಯ ಭೋಪತ್‌ಪುರ ಉಪವಿಭಾಗದಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಿಲಾಗಿದೆ ಎಂದು ಅಧಿಕಾರಿಗಳು ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಿವಾನ್: ಮದ್ಯ ನಿಷೇಧಿಸಲಾಗಿರುವ ಬಿಹಾರದ ಸಿವಾನ್ ಜಿಲ್ಲೆಯ ಭೋಪತ್‌ಪುರ ಉಪವಿಭಾಗದಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಿಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಹೊಟ್ಟೆನೋವು, ವಾಕರಿಕೆ ಮತ್ತು ತಲೆತಿರುಗುವಿಕೆಯಿಂದ ಬಳಲುತ್ತಿದ್ದ 10 ಜನರನ್ನು ಸಿವಾನ್‌ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

"ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಸಿವಾನ್ ಆಸ್ಪತ್ರೆಯ ವೈದ್ಯರು ಘೋಷಿಸಿದರೆ, ಇಬ್ಬರು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ(PMCH) ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಏಳು ಜನ ಸಿವಾನ್‌ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಪ್ರಕಟಣೆ ತಿಳಿಸಿದೆ.

ಅಸ್ವಸ್ಥಗೊಂಡಿರುವ ಏಳು ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಪ್ರಿಲ್ 2016 ರಿಂದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆ ನಿಷೇಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದರೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com