
ರಕ್ಷಣಾ ಕಾರ್ಯಾಚರಣೆ ಚಿತ್ರ
ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ವಿಪತ್ತು ನಿರ್ವಹಣಾ ಸಿಬ್ಬಂದಿ, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇಲ್ಲಿಯವರೆಗೂ ಮೂರು ಮೃತದೇಹಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಠಾಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭೂಕಂಪನದಿಂದ ಕಟ್ಟಡ ಕುಸಿತವಾಗಿರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಖನೌ ಜಿಲ್ಲಾಧಿಕಾರಿ ಸೂರ್ಯಪಾಲ್ ಗಂಗವಾರ್, ಈಗ ಏನು ಅಂತಾ ಹೇಳಲು ಸಾಧ್ಯವಾಗುತ್ತಿಲ್ಲ, ಪರಿಶೀಲನೆ ನಂತರ ಕಾರಣ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.