
ಬಿಹಾರ ನಕಲಿ ಮದ್ಯ ದುರಂತ (ಸಾಂಕೇತಿಕ ಚಿತ್ರ)
ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್‌ನ ಬಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ ಐದಕ್ಕೆ ಏರಿದೆ.
ಇದನ್ನೂ ಓದಿ: ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವು, ಏಳು ಮಂದಿ ಅಸ್ವಸ್ಥ
ನಕಲಿ ಮದ್ಯ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿರುವ ಎಲ್ಲರೂ ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಇದುವರೆಗೆ 16 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಬಿಹಾರ: ಹೂಚ್ ದುರಂತ ಪ್ರಕರಣದ ಮಾಸ್ಟರ್ ಮೈಂಡ್ ಬಂಧನ
ಕಳೆದ ವರ್ಷ ಡಿಸೆಂಬರ್ 21 ರಂದು ದಾನಪುರದ ಗಟಾರವೊಂದರಲ್ಲಿ ಬಚ್ಚಿಟ್ಟಿದ್ದ ಅಕ್ರಮ ಮದ್ಯದ ಬಾಟಲಿಗಳನ್ನು ಬಿಹಾರ ಪೊಲೀಸರು ವಶಪಡಿಸಿಕೊಂಡ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.