ಹೈದ್ರಾಬಾದ್: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಯು ಟ್ಯೂಬ್ ಹಾಗೂ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿರುವಂತೆಯೇ, ಹೈದ್ರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ.
ಇಲ್ಲಿನ ಸೆಂಟ್ರಲ್ ಯೂನಿವರ್ಸಿಟಿಯ ವಿದ್ಯಾರ್ಥಿಗಳ ಗುಂಪೊಂದು ಭಾನುವಾರ ರಾತ್ರಿ ಕ್ಯಾಂಪಸ್ ಆವರಣದಲ್ಲಿ ಬಿಬಿಸಿ ನಿರ್ಮಿಸಿರುವ ಇಂಡಿಯಾ: ದಿ ಮೋದಿ ಕ್ವೆಶ್ಚನ್ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಲಿಖಿತ ದೂರಿನ ಮೇರೆಗೆ ತನಿಖೆ ಆರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರವು ದೇಶದಾದ್ಯಂತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ಸಮಯದಲ್ಲಿ ಹೈದ್ರಾಬಾದ್ ವಿವಿ ಕ್ಯಾಂಪಸ್ ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗಿದೆ. ಮತ್ತೊಂದೆಡೆ ಮಂಗಳವಾರ ರಾತ್ರಿ ತನ್ನ ಕಚೇರಿಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುವುದಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್ ಯುಎಸ್ ಯು) ತಿಳಿಸಿದೆ. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿದೆ.
Advertisement