ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪಿನಿಂದ ಪ್ರಧಾನಿ ಮೋದಿ ಕುರಿತ BBCಯ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ!
ತೀವ್ರ ವಿವಾದಕ್ಕೆ ಕಾರಣವಾಗಿರುವು ಬಿಬಿಸಿ ಸಂಸ್ಥೆಯ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುಂಪೊಂದು ಪ್ರದರ್ಶನ ಮಾಡಿದೆ.
Published: 24th January 2023 11:56 AM | Last Updated: 24th January 2023 11:56 AM | A+A A-

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ
ಹೈದರಾಬಾದ್: ತೀವ್ರ ವಿವಾದಕ್ಕೆ ಕಾರಣವಾಗಿರುವು ಬಿಬಿಸಿ ಸಂಸ್ಥೆಯ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುಂಪೊಂದು ಪ್ರದರ್ಶನ ಮಾಡಿದೆ.
ಈಗಾಗಲೇ ತೀವ್ರ ವಿವಾದಕ್ಕೀಡಾರುವ BBCಯ "India: The Modi Question" ಸಾಕ್ಷ್ಯಚಿತ್ರ ಪ್ರಸಾರವನ್ನು ಕೇಂದ್ರ ಸರ್ಕಾರ ಯೂಟ್ಯೂಬ್ ಮತ್ತು ಟ್ವಿಟರ್‌ನಲ್ಲಿ ನಿರ್ಬಂಧಿಸಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತದ ನಾಯಕರು ಮತ್ತು ಸಮಾಜದ ಒಂದು ವರ್ಗದಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಅದಾಗ್ಯೂ ಈ ವಿವಾದಿತ ಸಾಕ್ಷ್ಯಚಿತ್ರ ಇನ್ನೂ ಅನೇಕ ಡಾರ್ಕ್ ವೆಬ್‌ಸೈಟ್‌ಗಳಲ್ಲಿ ಇದು ಅಸ್ತಿತ್ವದಲ್ಲಿದ್ದು, ಪ್ರೇಕ್ಷಕರಿಗೆ ದೊರೆಯುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸಲಾಗುವುದು: ಸಿಪಿಎಂ ಯುವ ಘಟಕ
ಇದಕ್ಕೆ ಇಂಬು ನೀಡುವಂತೆ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುಂಪೊಂದು ಈ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿದ್ದು, ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯ ಕ್ಯಾಂಪಸ್‌ನಲ್ಲೇ ಪ್ರದರ್ಶನ ಮಾಡಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೈದರಾಬಾದ್ ಪೊಲೀಸರು ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಈ ಸಂಬಂಧ ಲಿಖಿತ ದೂರಿನ ಸ್ವೀಕೃತಿಯ ಮೇರೆಗೆ ತನಿಖೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ
ಈ ಹಿಂದೆ ಜನವರಿ 24 ರಂದು ಜೆಎನ್ ಯು ವಿಶ್ವವಿದ್ಯಾಲಯ ಆವರಣದಲ್ಲೂ ಇಂತಹುದೇ ಪ್ರಯತ್ನ ನಡೆದಿದೆ. ಆದರೆ ಪೊಲೀಸರ ಮಧ್ಯಪ್ರವೇಶದಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಪೊಲೀಸರ ಕ್ರಮಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಇಂತಹ ಅನಧಿಕೃತ ಚಟುವಟಿಕೆ ವಿಶ್ವವಿದ್ಯಾನಿಲಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು ಎಂದು ಜೆಎನ್‌ಯು ಆಡಳಿತ ಹೇಳಿದೆ.
ಸರ್ಕಾರದಿಂದಲೇ ವಿಡಿಯೋಗೆ ನಿಷೇಧ
ವಾಸ್ತವವಾಗಿ ಬಿಬಿಸಿ ಇಂಡಿಯಾ: ಮೋದಿ ಪ್ರಶ್ನೆ ಎಂಬ ಹೆಸರಿನ ಸಾಕ್ಷ್ಯಚಿತ್ರವನ್ನು ಮಾಡಿದೆ, ಅದರ ಮೊದಲ ಸಂಚಿಕೆಯ ಕ್ಲಿಪ್ ವೈರಲ್ ಆಗುತ್ತಿದೆ. ವರದಿಗಳ ಪ್ರಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ವೀಡಿಯೊವನ್ನು ನಿರ್ಬಂಧಿಸಲು ಆದೇಶಿಸಿದೆ. ಈ ವಿಡಿಯೋಗೆ ಸಂಬಂಧಿಸಿದಂತೆ ಸುಮಾರು 50 ಟ್ವೀಟ್‌ಗಳನ್ನು ಮಾಡಲಾಗಿದ್ದು, ಅವುಗಳನ್ನು ನಿರ್ಬಂಧಿಸಲಾಗಿದೆ. ಐಟಿ ನಿಯಮಗಳು 2021 ರ ತುರ್ತು ಅಧಿಕಾರದ ಅಡಿಯಲ್ಲಿ ಈ ಆದೇಶವನ್ನು ನೀಡಲಾಗಿದೆ. ಈ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಗಳನ್ನು ಆಧರಿಸಿದೆ. ಇದನ್ನು ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಎಂದು ಬಣ್ಣಿಸಲಾಗಿದೆ.