ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿರ್ಬಂಧ ಸಮರ್ಥಿಸಿಕೊಂಡ ಅನಿಲ್ ಆ್ಯಂಟೊನಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ!
ಪ್ರಧಾನಿ ಮೋದಿಯವರು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟೊನಿ ಅವರ ಪುತ್ರ ಅನಿಲ್ ಕೆ ಆ್ಯಂಟೊನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
Published: 25th January 2023 10:17 AM | Last Updated: 25th January 2023 05:22 PM | A+A A-

ಅನಿಲ್ ಆ್ಯಂಟೊನಿ
ನವದೆಹಲಿ: ಪ್ರಧಾನಿ ಮೋದಿಯವರು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟೊನಿ ಅವರ ಪುತ್ರ ಅನಿಲ್ ಕೆ ಆ್ಯಂಟೊನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಅನಿಲ್ ಆ್ಯಂಟೊನಿಯವರು, ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
I have resigned from my roles in @incindia @INCKerala.Intolerant calls to retract a tweet,by those fighting for free speech.I refused. @facebook wall of hate/abuses by ones supporting a trek to promote love! Hypocrisy thy name is! Life goes on. Redacted resignation letter below. pic.twitter.com/0i8QpNIoXW
— Anil K Antony (@anilkantony) January 25, 2023
“ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ಮಾಡಿರುವ ಟ್ವೀಟ್ ಅನ್ನು ವಾಪಸ್ ಪಡೆಯಬೇಕೆಂಬ” ಅಸಹಿಷ್ಣುತೆಯ ಫೋನ್ ಕರೆಗಳಿಂದ ಅಸಮಾಧಾನಗೊಂಡಿರುವ ಅನಿಲ್ ಕೆ.ಆ್ಯಂಟೊನಿ, ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ: ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪಿನಿಂದ ಪ್ರಧಾನಿ ಮೋದಿ ಕುರಿತ BBCಯ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ!
ಪ್ರಧಾನಿ ಮೋದಿ ಹಾಗೂ 2002 ರ ಗುಜರಾತ್ ಗಲಭೆಯ ಬಗ್ಗೆ ಬಿಬಿಸಿಯ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದ ಅನಿಲ್ ಆ್ಯಂಟೊನಿಯವರು, "ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ" ಹೊಂದಿರುವ ಬಿಬಿಸಿಯನ್ನು ಸರಕಾರಿ ಪ್ರಾಯೋಜಿತ ಚಾನೆಲ್ ಎಂದು ಕರೆದಿದ್ದರು.