ಜಾರಿ ನಿರ್ದೇಶನಾಲಯದಿಂದ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ...
ಸಾಕೇತ್ ಗೋಖಲೆ
ಸಾಕೇತ್ ಗೋಖಲೆ

ಅಹಮದಾಬಾದ್: ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಸದ್ಯ ಗುಜರಾತ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗೋಖಲೆ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗುಜರಾತ್ ಪೊಲೀಸರು ಗೋಖಲೆ ಅವರನ್ನು ದೆಹಲಿಯಲ್ಲಿ ಡಿಸೆಂಬರ್ 29 ರಂದು ಬಂಧಿಸಿದ್ದರು.

ಸೇತುವೆ ಕುಸಿತದ ದುರಂತದ ನಂತರ ಮೊರ್ಬಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೆಚ್ಚದ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಡಿಸೆಂಬರ್‌ನಲ್ಲಿ ಗುಜರಾತ್ ಪೊಲೀಸರು ಗೋಖಲೆ ಅವರನ್ನು ಎರಡು ಬಾರಿ ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com