74ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ದೆಹಲಿಗೆ ಆಗಮನ, ಪ್ರಧಾನಿ ಮೋದಿಯಿಂದ ಸ್ವಾಗತ

74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮಂಗಳವಾರ ನವದೆಹಲಿಗೆ ಆಗಮಿಸಿದ್ದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆತ್ಮೀಯವಾಗಿ ಸ್ವಾಗತಿಸಿದರು.
ನವದೆಹಲಿಗೆ ಆಗಮಿಸಿದ ಈಜಿಪ್ಟ್ ಅಧ್ಯಕ್ಷ.
ನವದೆಹಲಿಗೆ ಆಗಮಿಸಿದ ಈಜಿಪ್ಟ್ ಅಧ್ಯಕ್ಷ.

ನವದೆಹಲಿ: 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮಂಗಳವಾರ ನವದೆಹಲಿಗೆ ಆಗಮಿಸಿದ್ದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆತ್ಮೀಯವಾಗಿ ಸ್ವಾಗತಿಸಿದರು.

 2014ರಲ್ಲಿ ಈಜಿಪ್ಟ್​​ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಅಬ್ದೆಲ್ಲ ಫತ್ತಾಹ್​ ಅವರು, ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ.

ಭಾರತ-ಈಜಿಪ್ಟ್​ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ 75ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲೇ, ಭಾರತದ 74ನೇ ಗಣರಾಜ್ಯೋತ್ಸವಕ್ಕೆ ಈಜಿಪ್ಟ್​ ಅಧ್ಯಕ್ಷರು ಆಗಮಿಸುತ್ತಿರುವುದು ಬಹಳ ಪ್ರಾಮುಖ್ಯತೆ ಪಡೆದಿದೆ.

ಅಬ್ದುಲ್​ ಫತ್ತಾಹ್​ ಎಲ್​-ಸಿಸಿ ಅವರು ಮಂಗಳವಾರ ಸಂಜೆ, ತಮ್ಮ ದೇಶದ 5 ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ದೆಹಲಿಗೆ ಬಂದಿಳಿದಿದ್ದಾರೆ.

ಇವರು ಜನವರಿ 27ರವರೆಗೆ ಭಾರತದಲ್ಲೇ ಇರಲಿದ್ದು, ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಗೌರವ ಸ್ವೀಕರಿಸಲಿದ್ದಾರೆ. ಅಲ್ಲದೆ, ಪಥಸಂಚಲನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com