ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಭತ್ಯೆ ಘೋಷಿಸಿದ ಛತ್ತೀಸ್ ಗಢ ಸಿಎಂ ಬಘೇಲ್

ಮುಂದಿನ ವರ್ಷ ಛತ್ತೀಸ್ ಗಢ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಸಿಎಂ ಭೂಪೇಶ್ ಬಘೇಲ್ ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದಾರೆ. 
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್

ರಾಯ್ ಪುರ: ಮುಂದಿನ ವರ್ಷ ಛತ್ತೀಸ್ ಗಢ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಸಿಎಂ ಭೂಪೇಶ್ ಬಘೇಲ್ ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದಾರೆ. 

2018 ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು. 2018 ರಲ್ಲಿ 15 ವರ್ಷಗಳ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು.

 ಗಣರಾಜ್ಯೋತ್ಸವದ ಅಂಗವಾಗಿ ಮಾತನಾಡಿದ ಬಘೇಲ್, ಗ್ರಾಮೀಣ ಉದ್ಯಮ ನೀತಿಯ ರಚನೆಯನ್ನು ಘೋಷಿಸಿದ್ದಾರೆ. 

ಕೈಗಾರಿಕಾ ಇಲಾಖೆಯಿಂದ ಅಭಿವೃದ್ಧಿಯಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಗೆ ಆಸ್ತಿ ತೆರಿಗೆಯಿಂದ ವಿನಾಯ್ತಿ ನೀಡಲಾಗುವುದು ಎಂದು ಸಿಎಂ ಬಘೇಲ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com