ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 132 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 132 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,906ಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,82,338 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ


ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 132 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,906ಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,82,338 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇಂದು ಕೇರಳದಲ್ಲಿ ಒಬ್ಬರು ಸೇರಿದಂತೆ ದೇಶದಾದ್ಯಂತ ಈವರೆಗೆ 5,30,738 ಮಂದಿ ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 0.08ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.08ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಈವರೆಗೆ ದೇಶದಾದ್ಯಂತ 4,41,49,694 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.35 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com