ಆಗ್ರಾ: 6 ಮನೆಗಳು ಕುಸಿದು ಓರ್ವ ಬಾಲಕಿ ಸಾವು, ಕುಟುಂಬದ ಮತ್ತಿಬ್ಬರಿಗೆ ಗಾಯ!

ಆಗ್ರಾದಲ್ಲಿ ಇಂದು ಬೆಳಗ್ಗೆ ಹೋಟೆಲೊಂದರ ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ಆಗ್ರಾ: ಆಗ್ರಾದಲ್ಲಿ ಇಂದು ಬೆಳಗ್ಗೆ ಹೋಟೆಲೊಂದರ ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಇಬ್ಬರು ಸಾವನ್ನಪ್ಪಿ 12ಕ್ಕೂ ಹೆಚ್ಚು ಜನರು ಗಾಯಗೊಂಡ ಎರಡು ದಿನಗಳ ನಂತರ ಈ ಘಟನೆ ನಡೆದಿದೆ.

ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಎಡಿಎಂ ಅಂಜನಿ ಕುಮಾರ್ ಸಿಂಗ್ ತಿಳಿಸಿದ್ದಾರೆ. ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದಿರುವ ಧುಲಿಯಾ ಗಂಜ್ ಪ್ರದೇಶದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ವೇಗದಲ್ಲಿ ನಡೆಯುತ್ತಿದೆ ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಿಎಸ್ ಚೌಹಾಣ್ ಹೇಳಿದ್ದಾರೆ.

ದುರ್ಘಟನೆಯ ಬಗ್ಗೆ ಮಾಹಿತಿ ಸಿಕ್ಕಕೂಡಲೇ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯಗಳನ್ನು ನಡೆಸುವಂತೆ ಸೂಚಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com