ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಆಗಮಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು.
Published: 26th January 2023 10:49 AM | Last Updated: 26th January 2023 10:49 AM | A+A A-

ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ.
ನವದೆಹಲಿ: 74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮರ್ ಜವಾನ್ ಜ್ಯೋತಿ ಬಳಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.
ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಂತರ ಕರ್ತವ್ಯಪಥದತ್ತ ಮೋದಿ ಸಾಗಿದರು.