ಗಣರಾಜ್ಯೋತ್ಸವ ಸಾಂವಿಧಾನಿಕ ಮೌಲ್ಯಗಳಿಗೆ ಮರು ಸಮರ್ಪಿಸುವ ಸಂದರ್ಭ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ 'ಗಂಭೀರ ಸಂದರ್ಭ' ಎಂದು ಬಣ್ಣಿಸಿದ್ದಾರೆ.
ಮಲ್ಲಿಕಾರ್ಜನ ಖರ್ಗೆ
ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ 'ಗಂಭೀರ ಸಂದರ್ಭ' ಎಂದು ಬಣ್ಣಿಸಿದ್ದಾರೆ.

74ನೇ ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಉಲ್ಲೇಖಿಸಿದ ಅವರು, 'ಮೊದಲು ಅಥವಾ ಕೊನೆಯಾಗಲಿ ನಾವು ಭಾರತೀಯರು ಎಂದರು.

ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ನಮ್ಮನ್ನು ಅರ್ಪಿಸಿಕೊಳ್ಳುವ ಗಂಭೀರ ಸಂದರ್ಭವಾಗಿದೆ ಎಂದು ಪ್ರತಿಪಾದಿಸಿದ ಅವರು, 10 ರಾಜಾಜಿ ಮಾರ್ಗದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಮತ್ತು ನಮ್ಮ ಹುತಾತ್ಮರು ಮತ್ತು ಆಧುನಿಕ ಭಾರತದ ನಿರ್ಮಾತೃಗಳ ತ್ಯಾಗವನ್ನು ಸ್ಮರಿಸುವುದಾಗಿ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ, ನನ್ನ ಪ್ರೀತಿಯ ಸಹ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com