ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಸದ್ಯ ನಡೆಯುತ್ತಿರುವ ಯುದ್ಧ ಮತ್ತು ಕೋವಿಡ್-19 ಸಾಂಕ್ರಾಮಿಕದಿಂದಾಗಿ ಚೀನಾ ಮತ್ತು ಉಕ್ರೇನ್‌ನಂತಹ ವಿದೇಶಗಳಲ್ಲಿ ವೈದ್ಯಕೀಯ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸದ್ಯ ನಡೆಯುತ್ತಿರುವ ಯುದ್ಧ ಮತ್ತು ಕೋವಿಡ್-19 ಸಾಂಕ್ರಾಮಿಕದಿಂದಾಗಿ ಚೀನಾ ಮತ್ತು ಉಕ್ರೇನ್‌ನಂತಹ ವಿದೇಶಗಳಲ್ಲಿ ವೈದ್ಯಕೀಯ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸಮಿತಿಯನ್ನು ರಚಿಸಲಾಗಿದೆ. ಆದರೆ,  ವೈದ್ಯಕೀಯ ವಿದ್ಯಾರ್ಥಿಗಳ ಕುರಿತಾಗಿ ನಿರ್ಧಾರ ತೆಗೆದುಕೊಳ್ಳಲು ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ತಿಳಿಸಿದ ನಂತರ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠವು ಆರು ವಾರಗಳ ಕಾಲ ಪ್ರಕರಣವನ್ನು ಮುಂದೂಡಿತು. ರಾಜ್ಯಗಳೊಂದಿಗೆ ಸಮಾಲೋಚಿಸಲು ಕೇಂದ್ರಕ್ಕೆ ಸಮಯ ಬೇಕಾಗುತ್ತದೆ ಎಂದು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಪೀಠದ ಮುಂದೆ ಮನವಿ ಸಲ್ಲಿಸಿದರು.

ವೈದ್ಯಕೀಯ ಶಿಕ್ಷಣದೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಸಮಿತಿಯ ಶಿಫಾರಸ್ಸುಗಳ ಪ್ರಕಾರ ಮುಂದುವರಿಯಬೇಕಾಗಿ ನ್ಯಾಯಾಲಯ ಪುನರುಚ್ಚರಿಸಿತು. 

ಜುಲೈ 28 ರಂದು ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ತಮ್ಮ ಪದವಿಪೂರ್ವ ವೈದ್ಯಕೀಯ ಕೋರ್ಸ್‌ನ ಕೊನೆಯ ವರ್ಷದಲ್ಲಿದ್ದ ವಿದ್ಯಾರ್ಥಿಗಳು ಮತ್ತು 2022 ರ ಜೂನ್ 30ಕ್ಕೂ ಮುನ್ನ ಕೋರ್ಸ್/ಪದವಿಯನ್ನು ಪೂರ್ಣಗೊಳಿಸಿ ಪ್ರಮಾಣ ಪತ್ರವನ್ನು ಪಡೆದವರಿಗೆ ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯನ್ನು (ಎಫ್ಎಂಜಿ)  ತೆಗೆದುಕೊಳ್ಳಲು ಅವಕಾಶ ನೀಡುವ ಯೋಜನೆಯನ್ನು ಸೂಚಿಸಿತ್ತು. 

ಎಫ್ಎಂಜಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ನಂತರ, ವೈದ್ಯಕೀಯ ಪದವೀಧರರು ಎರಡು ವರ್ಷಗಳ ಕಾಲ ಕಡ್ಡಾಯವಾಗಿ ರೊಟೇಟಿಂಗ್ ವೈದ್ಯಕೀಯ ಇಂಟರ್ನ್‌ಶಿಪ್‌ಗೆ ಒಳಗಾಗಬೇಕಾಗುತ್ತದೆ. ಈ ಯೋಜನೆಯು ಅವರ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಅನ್ವಯಿಸುವುದರಿಂದ ಮತ್ತು ಅವರ ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರಿಂದ, ಡಿಸೆಂಬರ್ 9 ರಂದು ವಿದ್ಯಾರ್ಥಿಗಳ ವೃತ್ತಿಜೀವನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಸಮಿತಿಯನ್ನು ರಚಿಸುವಂತೆ ಕೇಂದ್ರ ಮತ್ತು ಎನ್‌ಎಂಸಿಗೆ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com