ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ: ಸುಪ್ರೀಂಗೆ ಕೇಂದ್ರ ಮಾಹಿತಿ
2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
Published: 27th January 2023 06:20 PM | Last Updated: 27th January 2023 06:20 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: 2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ದೇಶದಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಅಳಿವಿನಂಚಿನಲ್ಲಿರುವ ಹುಲಿಗಳನ್ನು ಉಳಿಸುವಂತೆ ಕೋರಿ 2017ರಲ್ಲಿ ವಕೀಲ ಅನುಪಮ್ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠಕ್ಕೆ ಈ ಮಾಹಿತಿ ನೀಡಿದರು.
ಇದನ್ನು ಓದಿ: ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ; ಕಾಫಿ ಬೆಳೆ ಕೊಯ್ಲು ಮಾಡಲು ಎದುರಾದ ಸಂಕಷ್ಟ
ದೇಶದಲ್ಲಿ ಹುಲಿಗಳ ಸಂರಕ್ಷಣೆ ಮತ್ತು ಅವುಗಳ ಜನಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸಾಕಷ್ಟು ಕೆಲಸ ಮಾಡಿದೆ ಎಂದು ಭಾಟಿ ಅವರು ತಿಳಿಸಿದರು.
"2018 ರ ಹುಲಿ ಗಣತಿಯ ಪ್ರಕಾರ, ಭಾರತದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿದ್ದು, ಈ ಸಂಖ್ಯೆಯು ಜಾಗತಿಕ ಸಂಖ್ಯೆಯ ಶೇಕಡಾ 70 ರಷ್ಟಿದೆ ಮತ್ತು ಅಂಕಿಅಂಶಗಳು ಹುಲಿಗಳ ಬೆಳವಣಿಗೆಯನ್ನು ಸೂಚಿಸುತ್ತವೆ ಎಂದು ಎಎಸ್‌ಜಿ ಐಶ್ವರ್ಯಾ ಭಾಟಿ ಹೇಳಿದರು.
ಅರ್ಜಿದಾರ ಅನುಪಮ್ ತ್ರಿಪಾಠಿ ಅವರು ವಿಚಾರಣೆಗೆ ಗೈರುಹಾಜರಾಗಿದ್ದರಿಂದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತು.