ಉತ್ತರ ಪ್ರದೇಶ: ವ್ಯಕ್ತಿಗೆ ಥಳಿಸಿ, ಹಣ ದೋಚಿದ್ದ 6 ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ವ್ಯಕ್ತಿಯೊಬ್ಬರಿಗೆ ಥಳಿಸಿ ಹಣ ದೋಚಿದ ಆರೋಪದ ಮೇಲೆ ಆರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
Published: 27th January 2023 07:36 PM | Last Updated: 27th January 2023 07:36 PM | A+A A-

ಸಾಂದರ್ಭಿಕ ಚಿತ್ರ
ಶಹಜಹಾನ್‌ಪುರ: ವ್ಯಕ್ತಿಯೊಬ್ಬರಿಗೆ ಥಳಿಸಿ ಹಣ ದೋಚಿದ ಆರೋಪದ ಮೇಲೆ ಆರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
2017ರಲ್ಲಿ ರಸ್ತೆಯಲ್ಲಿ ನಡೆದ ಜಗಳದಲ್ಲಿ ವೆಂಕಟೇಶ್ ಮಿಶ್ರಾ ಎಂಬಾತನನ್ನು ಥಳಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್, ಮೂವರು ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ವಿರುದ್ಧ ಕೇಸ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.
ಇದನ್ನು ಓದಿ:
ಪೊಲೀಸರು ವೆಂಕಟೇಶ್ ಮಿಶ್ರಾ ಅವರನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆ. ಅಲ್ಲದೆ ಮಿಶ್ರಾ ಅವರ ಜೇಬಿನಿಂದ 5,000 ರೂ.ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮಿಶ್ರಾ ಪರ ವಕೀಲ ಅವದೇಶ್ ಸಿಂಗ್ ಹೇಳಿದ್ದಾರೆ.
ಪೊಲೀಸ್ ಪೇದೆಗಳಾದ ಅಜಯ್ ಚೌಧರಿ ಮತ್ತು ವಿಜಯ್ ವೀರ್ ಮತ್ತು ಸಬ್ ಇನ್ಸ್‌ಪೆಕ್ಟರ್‌ಗಳಾದ ಪ್ರಕಾಶ್ ಸಿಂಗ್, ಬಲರಾಮ್ ಸಿಂಗ್ ಹಾಗೂ ಕ್ರಾಂತಿವೀರ್ ಸಿಂಗ್ ಮತ್ತು ಇನ್ಸ್‌ಪೆಕ್ಟರ್ ಡಿ ಸಿ ಶರ್ಮಾ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರ್ಟ್ ಮಂಗಳವಾರ ಆದೇಶಿಸಿದೆ ಎಂದು ವಕೀಲರು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಬಗ್ಗೆ ಮಾಹಿತಿ ಪಡೆದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ನಗರ) ಸಂಜಯ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ.