ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ...
Published: 27th January 2023 05:55 PM | Last Updated: 27th January 2023 05:55 PM | A+A A-

ಆರೋಪಿ ಶಂಕರ್ ಮಿಶ್ರಾ
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಜನವರಿ 30ಕ್ಕೆ ಮುಂದೂಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಜ್ಯೋತ್ ಸಿಂಗ್ ಭಲ್ಲಾ ಅವರು, ತನಿಖಾಧಿಕಾರಿ ವಿಚಾರಣೆಗೆ ಹಾಜರಾಗದಿರುವುದರಿಂದ ವಿಚಾರಣೆಯನ್ನು ಮುಂದೂಡಿದರು.
ಇದನ್ನು ಓದಿ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಮಿಶ್ರಾಗೆ ಏರ್ ಇಂಡಿಯಾದಿಂದ 4 ತಿಂಗಳು ನಿಷೇಧ
ವಿಚಾರಣೆಯ ಸಂದರ್ಭದಲ್ಲಿ ಮಿಶ್ರಾ ಪರ ವಕೀಲ ರಮೇಶ್ ಗುಪ್ತಾ ಅವರು, ವಿಚಾರಣೆ ಮುಂದೂಡುವುದನ್ನು ವಿರೋಧಿಸಿ ಇಂದು ಮಧ್ಯಾಹ್ನ 2 ಗಂಟೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಾಲಯ ಮುಂದಿನ ಸೋಮವಾರಕ್ಕೆ(ಜನವರಿ 30) ವಿಚಾರಣೆಯನ್ನು ಮುಂದೂಡಿದೆ.
ಆರೋಪಿ ಶಂಕರ್ ಮಿಶ್ರಾ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.