ಮೋರ್ಬಿ ಸೇತುವೆ ಕುಸಿತ ದುರಂತ ಪ್ರಕರಣ: 1,262 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ, ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಆರೋಪಿ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು.

ಮೋರ್ಬಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಚಾರ್ಜ್ ಶೀಟ್ ನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪಿ ಎಸ್ ಝಲಾ ಅವರು ಮೋರ್ಬಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈಗಾಗಲೇ ಜೈಲಿನಲ್ಲಿರುವ ಒಂಬತ್ತು ಆರೋಪಿಗಳ ಜೊತೆಗೆ, ಸೇತುವೆಯನ್ನು ನಿರ್ವಹಿಸುತ್ತಿದ್ದ ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಅವರನ್ನು ಹತ್ತನೇ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 30, 2022 ರ ಸೇತುವೆ ಕುಸಿತದ ಘಟನೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈಗಾಗಲೇ ಜಯಸುಖ್ ಪಟೇಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿ ಫೆಬ್ರವರಿ 1 ರಂದು ವಿಚಾರಣೆಗೆ ಬರಲಿದೆ.

ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್ (ಒರೆವಾ ಗ್ರೂಪ್) ಕುಸಿದು ಬಿದ್ದಿದ್ದ ಮಚ್ಚು ನದಿಯ ಮೇಲೆ ಬ್ರಿಟಿಷರ ಕಾಲದ ತೂಗು ಸೇತುವೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿತ್ತು.

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಯ ಮೇಲೆ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು 134 ಜನರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com