ತ್ರಿಪುರಾ ವಿಧಾನಸಭಾ ಚುನಾವಣೆ: ಬಿಜೆಪಿಯ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರಾ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗುವಾಹಟಿ: ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರಾ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಸೇರಿದಂತೆ 11 ಮಹಿಳೆಯರು ಮತ್ತು ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಬಿಜೆಪಿಯ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸುಮಾರು 15 ಅಭ್ಯರ್ಥಿಗಳು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 48 ಅಭ್ಯರ್ಥಿಗಳ ಹೆಸರನ್ನು ಕೇಂದ್ರ ನಾಯಕತ್ವ ಅಂತಿಮಗೊಳಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಾಲಿ ಆರು ಶಾಸಕರನ್ನು ಮೊದಲ ಪಟ್ಟಿಯಿಂದ ಕೈಬಿಡಲಾಗಿದೆ. ಶಾಸಕರಾದ ಅರುಣ್ ಚಂದ್ರ ಭೌಮಿಕ್(ಬೆಲೋನಿಯಾ), ಬಿಪ್ಲಬ್ ಘೋಷ್(ಮಾತಾಬರಿ), ಸುಭಾಷ್ ದಾಸ್(ನಾಲ್ಚಾರ್), ಮಿಮಿ ಮಜುಂದಾರ್(ಬದರ್‌ಘಾಟ್) ಬೀರೇಂದ್ರ ಕಿಶೋರ್ ದೆಬ್ಬರ್ಮಾ(ಗೋಲಘಾಟಿ) ಮತ್ತು ಪರಿಮಳ್ ದೆಬ್ಬರ್ಮಾ (ಅಂಬಾಸ) ಅವರಿಗೆ ಸದ್ಯಕ್ಕೆ ಟಿಕೆಟ್ ನಿರಾಕರಿಸಲಾಗಿದೆ.

ಮುಖ್ಯಮಂತ್ರಿ ಮಾಣಿಕ್ ಸಹಾ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com