ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ

ಅವಂತಿಪೋರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ಭಾಗವಹಿಸಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಲೆಥ್‌ಪೋರಾದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಜತೆ ಪ್ರಿಯಾಂಕಾ ಗಾಂಧಿ ಅವರು ಹೆಜ್ಜೆ ಹಾಕಿದರು.

ಲೆಥ್‌ಪೋರಾದಲ್ಲಿ ವಿರಾಮಕ್ಕಾಗಿ ಯಾತ್ರೆ ನಿಲ್ಲಿಸುವ ಮುನ್ನ ಬಿಗಿ ಭದ್ರತೆಯ ನಡುವೆ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರೊಂದಿಗೆ ಹೆಜ್ಜೆ ಹಾಕಿದರು.

ಯಾತ್ರೆಯು ಅವಂತಿಪೋರಾದಿಂದ ಪುನರಾರಂಭಗೊಂಡಿದ್ದು, ಅಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಅವರ ಮಗಳು ಇಲ್ತಿಜಾ ಮುಫ್ತಿ ಅವರು ಸಹ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ರಾಹುಲ್ ಗಾಂಧಿಗೆ ಸಾಥ್ ನೀಡುತ್ತಿದ್ದಾರೆ.

ಈ ವೇಳೆ ರಾಹುಲ್ ಗಾಂಧಿ ಅವರು ಫೆಬ್ರವರಿ 2019 ರಲ್ಲಿ ಲೆಥ್‌ಪೋರಾದಲ್ಲಿ ಉಗ್ರರು ಭದ್ರತಾ ಪಡೆಗಳ ಬಸ್ ಅನ್ನು ಸ್ಫೋಟಿಸಿದ ಸ್ಥಳದಲ್ಲಿ ಪುಷ್ಪಗುಚ್ಛವನ್ನು ಇಟ್ಟು ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com