ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ

ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.
ಅಮೃತ್ ಉದ್ಯಾನ್
ಅಮೃತ್ ಉದ್ಯಾನ್

ನವದೆಹಲಿ: ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.

"ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾಗಿರುವ ಹಿನ್ನೆಲೆಯಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ'  ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ 'ಅಮೃತ್ ಉದ್ಯಾನ್' ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ" ಎಂದು ರಾಷ್ಟ್ರಪತಿಗಳ ಪತ್ರಿಕಾ ಉಪ ಕಾರ್ಯದರ್ಶಿ ನವಿಕಾ ಗುಪ್ತಾ ಅವರು ತಿಳಿಸಿದ್ದಾರೆ.

ಅಮೃತ್ ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಹೇಳಿದ್ದಾರೆ.

ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದು ನವಿಕಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com