
ಇಂಡಿಗೋ ವಿಮಾನ
ಮುಂಬೈ: ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ.
ನಾಗ್ಪುರದಿಂದ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರೊಬ್ಬರು ವಿಮಾನವು ಮುಂಬೈನಲ್ಲಿ ಇಳಿಯಲು ಸಮೀಪಿಸುತ್ತಿದ್ದಾಗ ತುರ್ತು ನಿರ್ಗಮನದ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದರು. ಈ ಕೃತ್ಯಕ್ಕಾಗಿ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ
ಅಂತೆಯೇ ವಿಮಾನಯಾನ ಸಂಸ್ಥೆ ಪ್ರಯಾಣಿಕನ ಯಾವುದೇ ವಿವರ ಹಂಚಿಕೊಂಡಿಲ್ಲ.. ಅಂತೆಯೇ ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದೂ ಇಂಡಿಗೋ ಸಂಸ್ಥೆ ಸ್ಪಷ್ಟಪಡಿಸಿದೆ.
ಏನಿದು ಘಟನೆ?
ನಾಗ್ಪುರದಿಂದ ಮುಂಬೈಗೆ 6E-5274 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನವು ಅಗಸದಲ್ಲಿರುವುವಾಗ ಮತ್ತು ಲ್ಯಾಂಡಿಂಗ್‌ಗೆ ಸಮೀಪಿಸುತ್ತಿದ್ದಾಗ ತುರ್ತು ನಿರ್ಗಮನದ ಬಾಗಿಲನ್ನು ತೆಗೆಯಲು ಪ್ರಯತ್ನಿದ್ದಾರೆ. ಆದರೆ ಈ ವೇಳೆ ಇದನ್ನು ಗಮನಿಸಿದ ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದು, ಕೂಡಲೇ ಪೈಲಟ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಅಂತೆಯೇ ವಿಮಾನವು ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿದ್ದಾಗ ತುರ್ತು ನಿರ್ಗಮನವನ್ನು ಅನಧಿಕೃತವಾಗಿ ಹಾಳುಮಾಡಿದ್ದಕ್ಕಾಗಿ ಪ್ರಯಾಣಿಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.