ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. 

'ನಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬಿಟ್ಟು ನೀವು ನಮಗಾಗಿ ಏನು ಮಾಡಿದ್ದೀರಿ? ಎಂದು ಇಂದು ಕಾಶ್ಮೀರಿ ಪಂಡಿತರು ಬಿಜೆಪಿ ಸರ್ಕಾರವನ್ನು ಕೇಳುತ್ತಿದ್ದಾರೆ. ನಿಮ್ಮ ಬಳಿ ಏನಾದರೂ ಉತ್ತರವಿದೆಯೇ, ಪ್ರಧಾನಮಂತ್ರಿಗಳೇ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಜಮ್ಮುವಿನಲ್ಲಿ ರಾಹುಲ್ ಗಾಂಧಿ ಕಾಶ್ಮೀರಿ ಪಂಡಿತರ ಗುಂಪಿನೊಂದಿಗೆ ಸಂವಾದ ನಡೆಸಿದರು. ಈ ವೇಳೆ, ಕಾಶ್ಮೀರಿ ಪಂಡಿತರೆಂದರೆ ಸರ್ಕಾರದಿಂದ ಎದುರಿಸುತ್ತಿರುವ ನಿರಾಸಕ್ತಿಯ ಬಗ್ಗೆ ದೂರಿದರು.

ವಿಡಿಯೋದಲ್ಲಿ, ಕಾಶ್ಮೀರಿ ಪಂಡಿತರು ಈ ವಿಷಯ ಜೀವಂತವಾಗಿರಬೇಕೆಂದು ಬಿಜೆಪಿ ಬಯಸುತ್ತದೆ ಮತ್ತು ಕೇಂದ್ರದ ಮನಮೋಹನ್ ಸಿಂಗ್ ಸರ್ಕಾರದ ನಂತರ ಯಾವುದೇ ಕಲ್ಯಾಣ ಕ್ರಮಗಳಿಲ್ಲ ಎಂದು ಹೇಳುತ್ತಿರುವುದು ಕಂಡುಬರುತ್ತದೆ.

ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಗೆ ಅಗಾಧ ಬೆಂಬಲ ಸಿಕ್ಕಿದ್ದು, ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಒಮರ್ ಅಬ್ದುಲ್ಲಾ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಕೂಡ ಯಾತ್ರೆಯಲ್ಲಿ ಪಾಲ್ಗೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com