ಮಹಾರಾಷ್ಟ್ರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮಹಿಳೆಗೆ ಮೂವರು ಮಕ್ಕಳಿದ್ದು, ನಾಸಿಕ್‌ನಲ್ಲಿರುವ ತಮ್ಮ ಸಂಬಂಧಿಕರ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು ಎಂದು ಬಾಲಕನ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಮಹಿಳೆ ಆಗಾಗ ಮುಂಬೈಗೆ ಬಂದು ಬಾಲಕನೊಂದಿಗೆ ಸ್ನೇಹ ಬೆಳೆಸುತ್ತಿದ್ದರು. ಆಕೆ ಆತನಿಗೆ ಮದ್ಯ ಸೇವಿಸುವಂತೆ ಮಾಡಿ ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಥಾಣೆಯ ಕಲ್ಯಾಣ್‌ನಲ್ಲಿರುವ ಕೋಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿ ದೂರನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಬಾಲಕನು ಶಾಲೆಯನ್ನು ಬಿಟ್ಟು ನಾಸಿಕ್‌ಗೆ ಮಹಿಳೆಯನ್ನು ಭೇಟಿಯಾಗಲು ಹೋಗುತ್ತಿದ್ದನು. ಆಕೆ ಆತನಿಗೆ ಆಕ್ಷೇಪಾರ್ಹ ವಿಡಿಯೋಗಳನ್ನು ತೋರಿಸುತ್ತಿದ್ದರು. ಇದು 2019 ರಿಂದ 2022ರ ಡಿಸೆಂಬರ್ ವರೆಗೆ ಸಂಭವಿಸಿದೆ. ನಂತರ ಹುಡುಗನ ತಾಯಿ ಈ ಬಗ್ಗೆ ತಿಳಿದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಮಹಿಳೆ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈವರೆಗೆ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com