ಹಿಮಾಚಲ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ

ಶಂಕಿತ ಸೈಬರ್ ಕ್ರಿಮಿನಲ್‌ಗಳು ಹಿಮಾಚಲ ಪ್ರದೇಶ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಅವರ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ಶಂಕಿತ ಸೈಬರ್ ಕ್ರಿಮಿನಲ್‌ಗಳು ಹಿಮಾಚಲ ಪ್ರದೇಶ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಅವರ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ನನ್ನ ಹೆಸರಿನಲ್ಲಿ ಸೃಷ್ಟಿಸಲಾದ ನಕಲಿ ಖಾತೆಯನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಾರೆ. ಜನ ಜಾಗೃತರಾಗಬೇಕು ಮತ್ತು ಅವರ ಬೇಡಿಕೆ ಸ್ಪಂದಿಸಬೇಡಿ ಎಂದು ಅರ್ಲೇಕರ್ ಅವರು ಸೋಮವಾರ ಮನವಿ ಮಾಡಿದ್ದಾರೆ.

ಔಪಚಾರಿಕ ದೂರು ದಾಖಲಿಸಿದ ನಂತರ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಹಿಮಾಚಲ ಪ್ರದೇಶ ಪೊಲೀಸರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಳೆದ ವರ್ಷ, ಶಂಕಿತ ಸೈಬರ್ ಕ್ರಿಮಿನಲ್‌ಗಳು ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ ಹಣ ಪಡೆಯಲು ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯಂತಹ ಹಿರಿಯ ನಾಯಕರು ಹಾಗೂ ಅಧಿಕಾರಿಗಳನ್ನು ಯಾಮಾರಿಸಿದ್ದರು.

ಹಿಮಾಚಲ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು 18,000 ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿವೆ.

ಇವುಗಳಲ್ಲಿ ಶೇ. 50ರಷ್ಟು ಹಣಕಾಸು ವಂಚನೆಗಳಿಗೆ ಸಂಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com