ಶಂಕಿತ ವಿಷಾಹಾರ ಸೇವನೆ; ವಯನಾಡ್ ಬೋರ್ಡಿಂಗ್ ಶಾಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥ
ಕೇರಳದ ವಯನಾಡ್ ಜಿಲ್ಲೆಯ ಲಕ್ಕಿಡಿ ಪ್ರದೇಶದ ಜವಾಹರ್ ನವೋದಯ ವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
Published: 30th January 2023 03:17 PM | Last Updated: 30th January 2023 03:17 PM | A+A A-

ಪ್ರಾತಿನಿಧಿಕ ಚಿತ್ರ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಲಕ್ಕಿಡಿ ಪ್ರದೇಶದ ಜವಾಹರ್ ನವೋದಯ ವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಶಂಕಿತ ವಿಷಾಹಾರ ಸೇವನೆಯಿಂದ ವಾಂತಿ ಭೇದಿಯಿಂದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರೆಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈತಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರದಿಂದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಭಾನುವಾರ ರಾತ್ರಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಸ್ವಸ್ಥರಾದ ವಿದ್ಯಾರ್ಥಿಗಳ ನಿಖರ ಸಂಖ್ಯೆ ಮತ್ತು ಅದಕ್ಕೆ ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಪ್ರದೇಶದ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರಿ ವಸತಿ ಶಾಲೆಯಾಗಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 486 ವಿದ್ಯಾರ್ಥಿಗಳು ಓದುತ್ತಿದ್ದಾರೆ.