ಜಮ್ಮು ಮತ್ತು ಕಾಶ್ಮೀರ: ಪವಿತ್ರ ಖೀರ್ ಭವಾನಿ ದೇವಸ್ಥಾನಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 31st January 2023 12:43 PM | Last Updated: 31st January 2023 07:16 PM | A+A A-

ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಂದ 28 ಕಿಲೋಮೀಟರ್ ದೂರದಲ್ಲಿರುವ ಮಧ್ಯ ಕಾಶ್ಮೀರ ಜಿಲ್ಲೆಯ ತುಲಾಮುಲಾ ಪ್ರದೇಶದಲ್ಲಿ ಪ್ರಬಲ ಚಿನಾರ್‌ಗಳ ನಡುವೆ ನೆಲೆಸಿರುವ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು ಎಂದು ಅವರು ಹೇಳಿದರು.
ಮಾತಾ ಖೀರ್ ಭವಾನಿ ಎಂದು ಕರೆಯಲ್ಪಡುವ ರಾಗ್ನ್ಯಾ ದೇವಿಯ ದೇಗುಲಕ್ಕೆ ಕೆಲವು ಕಾಂಗ್ರೆಸ್ ನಾಯಕರೊಂದಿಗೆ ಬಂದ ಇಬ್ಬರೂ ಪೂಜೆ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಚಂದ್ರಶೇಖರ್ ರಿಂದ ರಾಹುಲ್ ಗಾಂಧಿವರೆಗೆ: ಜನತೆಯ ಗಮನ ಕೇಂದ್ರೀಕರಿಸಲು ರಾಜಕಾರಣಿಗಳು ನಡೆಸಿದ ಯಾತ್ರೆಗಳ ಸಂಪೂರ್ಣ ವಿವರ!
ಈ ದೇವಾಲಯವು ಕಾಶ್ಮೀರಿ ಪಂಡಿತರಿಗೆ ಪೂಜ್ಯ ಕ್ಷೇತ್ರವಾಗಿದೆ. ಅವರು ದೇವಾಲಯದ ಕೆಳಗೆ ಹರಿಯುವ ಪವಿತ್ರ ಬುಗ್ಗೆ/ಚಿಲುಮೆ ನೀರಿನ ಬಣ್ಣವು ಕಣಿವೆಯ ಪರಿಸ್ಥಿತಿಯನ್ನು ಸೂಚಿಸುತ್ತದೆ ಎಂದು ನಂಬುತ್ತಾರೆ.
ಹೆಚ್ಚಿನ ಬಣ್ಣಗಳು ಯಾವುದೇ ನಿರ್ದಿಷ್ಟ ಪ್ರಾಮುಖ್ಯತೆಯನ್ನು ಹೊಂದಿಲ್ಲದಿದ್ದರೂ, ನೀರಿನ ಬಣ್ಣ ಕಪ್ಪು ಅಥವಾ ಗಾಢ ಬಣ್ಣಕ್ಕೆ ತಿರುಗಿದರೆ ಕಾಶ್ಮೀರಕ್ಕೆ ಅಶುಭ ಸಮಯಗಳ ಸೂಚನೆ ಎಂದು ನಂಬಲಾಗಿದೆ.