ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಸಂತಾಪ ಸೂಚಿಸಿದ್ದು, ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳನ್ನು ತಡೆಯಲು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ 'ಏನನ್ನೂ ಮಾಡಿಲ್ಲ' ಎಂದು ಟೀಕಿಸಿದ್ದಾರೆ.
Published: 01st July 2023 01:28 PM | Last Updated: 01st July 2023 07:03 PM | A+A A-

ಉದ್ಧವ್ ಠಾಕ್ರೆ
ಮುಂಬೈ: ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಸಂತಾಪ ಸೂಚಿಸಿದ್ದು, ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳನ್ನು ತಡೆಯಲು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ 'ಏನನ್ನೂ ಮಾಡಿಲ್ಲ' ಎಂದು ಟೀಕಿಸಿದ್ದಾರೆ.
ಕಳೆದ ವರ್ಷ ಎಕ್ಸ್‌ಪ್ರೆಸ್‌ವೇ ತೆರೆದಾಗಿನಿಂದ 300ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಈಗ ಸಂಭವಿಸಿದ ಬುಲ್ಧಾನಾ ಅಪಘಾತದಿಂದಲಾದರೂ ಸರ್ಕಾರ ಕಣ್ಣು ತೆರೆಯಬೇಕು ಎಂದು ಠಾಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಮುಂಜಾನೆ 1.30 ರ ಸುಮಾರಿಗೆ ಬುಲ್ಧಾನದ ಸಿಂಧ್‌ಖೇಡ್ರಾಜ ಬಳಿಯ ಪಿಂಪಲಖುಟಾ ಗ್ರಾಮದ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಇದ್ದಕ್ಕಿದ್ದಂತೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಬಸ್‌ನಲ್ಲಿ 33 ಮಂದಿ ಇದ್ದರು, ಅವರಲ್ಲಿ ಎಂಟು ಮಂದಿ ಬದುಕುಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಗ್ಪುರ-ಮುಂಬೈ ಸಮೃದ್ಧಿ ಮಹಾಮಾರ್ಗ್‌ನ 520 ಕಿಮೀ ಉದ್ದದ ಹಂತ-1 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.
ಇದನ್ನೂ ಓದಿ: ಮಹಾರಾಷ್ಟ್ರ: ಚಲಿಸುತ್ತಿದ್ದ ಬಸ್'ಗೆ ಇದ್ದಕ್ಕಿದ್ದಂತೆ ಹೊತ್ತಿಕೊಂಡ ಬೆಂಕಿ, 25 ಮಂದಿ ದುರ್ಮರಣ, 8 ಪ್ರಯಾಣಿಕರಿಗೆ ಗಾಯ
ಅಧಿಕೃತವಾಗಿ ಹೆದ್ದಾರಿಗೆ 'ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ' ಎಂದು ಹೆಸರಿಸಲಾಗಿದ್ದು, ಇದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಕನಸಿನ ಯೋಜನೆಯಾಗಿದೆ.
ಬುಲ್ಧಾನಾ ಅಪಘಾತವನ್ನು ದುರದೃಷ್ಟಕರ ಮತ್ತು ಆಘಾತಕಾರಿ ಎಂದು ಬಣ್ಣಿಸಿದ ಠಾಕ್ರೆ, 'ಕಳೆದ ಒಂದು ವರ್ಷದಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಅಪಘಾತಗಳಲ್ಲಿ 300ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಆದರೆ, ಅಪಘಾತಗಳನ್ನು ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬುಲ್ಧಾನಾ ಅಪಘಾತವು ಸರ್ಕಾರದ ಕಣ್ಣು ತೆರೆಸುತ್ತದೆ ಎಂದು ಭಾವಿಸುತ್ತೇವೆ' ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.