ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮೀಣ ಚುನಾವಣೆ ವೇಳೆ ಹಿಂಸಾಚಾರ; ಟಿಎಂಸಿ ಕಾರ್ಯಕರ್ತ ಸಾವು!

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತ ಸಾವನ್ನಪ್ಪಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತ ಸಾವನ್ನಪ್ಪಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.

52 ವರ್ಷದ ಜಿಯಾರುಲ್ ಮೊಲ್ಲಾಹ್ ಎಂದು ಗುರುತಿಸಲಾದ ಟಿಎಂಸಿ ಕಾರ್ಯಕರ್ತನನ್ನು ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿಯ ಫುಲ್ಮಲಾಂಚಾ ಪ್ರದೇಶದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಗುಂಡಿಕ್ಕಿ ಹತ್ಯೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ನಾಯಕರೊಬ್ಬರು ಟಿಎಂಸಿ ನಾಯಕ ಅಮರುಲ್ ಲಸ್ಕರ್ ಅವರ ಆಪ್ತ ಸಹಾಯಕರಾಗಿದ್ದ ಮೊಲ್ಲಾ ಅವರು ಆಡಳಿತ ಪಕ್ಷದೊಳಗಿನ ಆಂತರಿಕ ಕಲಹಕ್ಕೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಕಥಲಬೇರಿಯಾ ಗ್ರಾಮ ಪಂಚಾಯಿತಿಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿರುವ ಮೊಲ್ಲಾ ಅವರ ಪುತ್ರಿ ಮನ್ವಾರ ತಮ್ಮ ತಂದೆ ರಾಜಕೀಯ ತೊರೆಯುವಂತೆ ಬೆದರಿಕೆ ಇತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಟಿಎಂಸಿ ಶಾಸಕ ಶೋಕತ್ ಮೊಲ್ಲಾ ಮಾತನಾಡಿ, ಪೊಲೀಸರು ಈ ಬಗ್ಗೆ ತನಿಖೆ ನಡೆಸಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು. ಪೊಲೀಸ್ ವರದಿಗಳ ಪ್ರಕಾರ, ಜೂನ್ 9ರಂದು ಗ್ರಾಮೀಣ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com