16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್

ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.
ಸಂಜಯ್ ರಾವತ್
ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆ ಒಡೆಯಲು ಕಾರಣಕರ್ತರಾದ 16 ಶಾಸಕರು ಶೀಘ್ರದಲ್ಲೇ ಅನರ್ಹಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕೂಡ ಬದಲಾಗಲಿದೆ ಎಂದು ಹೇಳಿದ್ದಾರೆ.

ಏಕನಾಥ್ ಶಿಂಧೆಯವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಯಲಿದ್ದಾರೆ. ಏಕನಾಥ್ ಶಿಂಧೆ ಮತ್ತು 16 ಮಂದಿ ಶಾಸಕರು ಅನರ್ಹೊಳ್ಳಲಿದ್ದಾರೆಂಬುದನ್ನು ನಾನು ಸ್ಪಷ್ಟವಾಗಿ ಹೇಳುತ್ತೇನೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ "ಒಗ್ಗಟ್ಟಾಗಿ" ಹೋರಾಡಲಿವೆ  ತಿಳಿಸಿದ್ದಾರೆ.

ಬಿಜೆಪಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಡೆಯುತ್ತಿದೆ. ಆದರೆ, ಇದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ, ಮಹಾರಾಷ್ಟ್ರದಲ್ಲಿ ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆಂದು ಹೇಳಿದರು.

ನಿನ್ನೆಯಷ್ಟೇ ಎನ್'ಸಿಪಿ ನಾಯಕ ಅಜಿತ್ ಪವಾರ್ ಅವರು, ಶಿವಸೇನೆ-ಬಿಜೆಪಿ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com