ಮಹಾರಾಷ್ಟ್ರ ರಾಜಕೀಯ: ಅಜಿತ್ ಪವಾರ್ ಸೇರಿದಂತೆ 9 ಶಾಸಕರ ವಿರುದ್ಧ ಎನ್ ಸಿಪಿ ಅನರ್ಹತೆ ಅರ್ಜಿ ಸಲ್ಲಿಕೆ

ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿ ಏಕನಾಥ್ ಶಿಂಧೆ ಸರ್ಕಾರ ಸೇರ್ಪಡೆಗೊಂಡ ನಂತರ ಬಿಕ್ಕಟ್ಟಿಗೆ ಸಿಲುಕಿದ ಎನ್ ಸಿಪಿ, ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ.
ಪಢ್ನವೀಸ್ ಮತ್ತು ಅಜಿತ್ ಪವಾರ್ ಸಾಂದರ್ಭಿಕ ಚಿತ್ರ
ಪಢ್ನವೀಸ್ ಮತ್ತು ಅಜಿತ್ ಪವಾರ್ ಸಾಂದರ್ಭಿಕ ಚಿತ್ರ
Updated on

ಮುಂಬೈ: ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿ ಏಕನಾಥ್ ಶಿಂಧೆ ಸರ್ಕಾರ ಸೇರ್ಪಡೆಗೊಂಡ ನಂತರ ಬಿಕ್ಕಟ್ಟಿಗೆ ಸಿಲುಕಿದ ಎನ್ ಸಿಪಿ, ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಎಲ್ಲಾ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ದೃಢವಾಗಿ ನಿಂತಿದ್ದಾರೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ. 

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ ಎಂಟು ಜನರ ವಿರುದ್ಧ ತಮ್ಮ ಪಕ್ಷ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಭಾನುವಾರ ಹೇಳಿದ್ದಾರೆ. ಶರದ್ ಪವಾರ್ ಅವರ ಸೂಚನೆಯ ನಂತರ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಛಗನ್ ಭುಜಬಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರಂತಹ ಕಟ್ಟಾ ಶರದ್ ಪವಾರ್ ನಿಷ್ಠಾವಂತ ಎನ್‌ಸಿಪಿ ಶಾಸಕರು ಸೇರಿದಂತೆ ಎಂಟು ಇತರ ಎನ್‌ಸಿಪಿ ಶಾಸಕರನ್ನು ಮಂತ್ರಿ ಮಾಡಲಾಗಿದೆ. ರಾಜ್ಯ ಶಿಸ್ತು ಸಮಿತಿಯಲ್ಲಿ ದೂರು ದಾಖಲಾದ ನಂತರ ಇಮೇಲ್ ಮೂಲಕ ವಿಧಾನಸಭೆ ಸ್ಪೀಕರ್‌ಗೆ ಅನರ್ಹತೆ ಅರ್ಜಿ ಸಲ್ಲಿಸಲಾಯಿತು. ಅದನ್ನು ವಾಟ್ಸಾಪ್ ಮತ್ತು ಐಮೆಸೇಜ್‌ನಲ್ಲಿಯೂ ದೂರು ಸಲ್ಲಿಸಲಾಗಿದ್ದು, ಅದನ್ನು ಇಂದು ಆಲಿಸುವಂತೆ ನಾವು ವಿಧಾನಸಭಾ ಸ್ಪೀಕರ್‌ಗೆ ಒತ್ತಾಯಿಸಿದ್ದೇವೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

ಎನ್‌ಸಿಪಿಯ ಈ ಶಾಸಕರನ್ನು ದೇಶದ್ರೋಹಿ ಎಂದು ಕರೆಯಲು ಸಾಧ್ಯವಿಲ್ಲ, ಏಕೆಂದರೆ ಅವರ ದ್ರೋಹ ಇನ್ನೂ ಸಾಬೀತಾಗಿಲ್ಲ, ಅನೇಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು. ಈ ಮಧ್ಯೆ ಎನ್‌ಸಿಪಿ ಕಾರ್ಯಾಧ್ಯಕ್ಷೆ ಮತ್ತು ಅವರ ಸೋದರ ಸಂಬಂಧಿ ಸುಪ್ರಿಯಾ ಸುಳೆ ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com