ಪ್ರಧಾನಿ ಮೋದಿ ನಿವಾಸದ ಮೇಲೆ ಶಂಕಾಸ್ಪದ ಡ್ರೋಣ್ ಹಾರಾಟ: ಸಂಚಿನ ಶಂಕೆ, ದೆಹಲಿ ಪೊಲೀಸರಿಂದ ತೀವ್ರ ತನಿಖೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಶಂಕಾಸ್ಪದವಾಗಿ ಡ್ರೋಣ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಶಂಕಾಸ್ಪದವಾಗಿ ಡ್ರೋಣ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ನಿವಾಸದ ಮೇಲೆ ಡ್ರೋಣ್ ಹಾರಾಟ ನಡೆಸಿರುವುದನ್ನು ಮೋದಿ ಭದ್ರತೆಗಾಗಿ ನಿಯೋಜನೆಗೊಂಡಿರುವ ವಿಶೇಷ ರಕ್ಷಣಾ ದಳದ ಅಧಿಕಾರಿಗಳು ಗಮನಿಸಿದ್ದಾರೆ.

ಕೂಡಲೇ ದೆಹಲಿ ಪೊಲೀಸರು ಶೋಧಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಇದೂವರೆಗೆ ಯಾವುದೇ ಡ್ರೋಣ್ ಪತ್ತೆಯಾಗಿಲ್ಲ ಎಂದು ತಿಳಿದಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸವು ನೋ ಫ್ಲೈ ಝೋನ್ ಅಥವಾ ಡ್ರೋಣ್ ಝೋನ್ ಅಡಿಯಲ್ಲಿ ಬರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com