ವಿಜಯವಾಡ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈ.ಎಸ್.ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಕೆ.ವಿ.ಪಿ.ರಾಮಚಂದ್ರರಾವ್ ಹೇಳಿದ್ದಾರೆ.
ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಕಟ್ಟಾ ಕಾಂಗ್ರೆಸ್ಸಿಗ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ ಅವರನ್ನು ಪಕ್ಷಕ್ಕೆ ಸೇರುವಂತೆ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಖಮ್ಮಂ ಜಿಲ್ಲೆಯ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶರ್ಮಿಳಾ ಈಗಾಗಲೇ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಭಾನುವಾರ ಸಂಜೆ ತೆಲಂಗಾಣದ ಖಮ್ಮಂ ನಲ್ಲಿ ಸಾರ್ವಜನಿಕ ಭಾಷಣವನ್ನುದ್ದೇಶಿಸಿ ಹಿಂದಿರುಗಿದ ನಂತರ ಗನ್ನವರಂ ವಿಮಾನ ನಿಲ್ದಾಣದಲ್ಲಿ ರಾತ್ರಿ ಮಾಜಿ ರಾಜ್ಯಸಭಾ ಸದಸ್ಯ ರಾಮಚಂದ್ರರಾವ್ ಅವರನ್ನು ಭೇಟಿಯಾಗಿದ್ದರು.
ವೈಎಸ್‌ಆರ್‌ಟಿಪಿ ನಾಯಕಿ ರಾಜ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ರಾವ್ ತಳ್ಳಿ ಹಾಕಿದರು.
Advertisement