ಮೂತ್ರ ವಿಸರ್ಜನೆ ಪ್ರಕರಣ
ಮೂತ್ರ ವಿಸರ್ಜನೆ ಪ್ರಕರಣ

ಮಧ್ಯ ಪ್ರದೇಶ: ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಬಿಡುಗಡೆ ಮಾಡಿ ಎಂದ ಸಂತ್ರಸ್ತ

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ತಪ್ಪಿನ ಅರಿವಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸಂತ್ರಸ್ತ ಬುಡಕಟ್ಟು ಜನಾಂಗದ ವ್ಯಕ್ತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿಧಿ: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ತಪ್ಪಿನ ಅರಿವಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸಂತ್ರಸ್ತ ಬುಡಕಟ್ಟು ಜನಾಂಗದ ವ್ಯಕ್ತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

"ರಾಜ್ಯ ಸರ್ಕಾರಕ್ಕೆ ನನ್ನ ಬೇಡಿಕೆ ಏನೆಂದರೆ, ಅವರಿಂದ(ಆರೋಪಿಗಳಿಂದ) ತಪ್ಪಾಗಿದೆ. ಈಗ ಪ್ರವೇಶ್ ಶುಕ್ಲಾ ಅವರನ್ನು ಬಿಡುಗಡೆ ಮಾಡಬೇಕು. ಈ ಹಿಂದೆ ಏನೇ ಮಾಡಿದ್ದರೂ ಈಗ ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ" ಎಂದು ರಾವತ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ದಶ್ಮತ್ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಪ್ರವೇಶ್ ಶುಕ್ಲಾ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಘಟನೆಯ ವಿಡಿಯೋ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಐಪಿಸಿ ಮತ್ತು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಶುಕ್ಲಾ ವಿರುದ್ಧ ಕೇಸ್ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಜೈಲಿನಲ್ಲಿರುವ ಆರೋಪಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲಾಗಿದೆ.

ಸಿಧಿಯಲ್ಲಿ ಶುಕ್ಲಾ ಅವರಿಗೆ ಸೇರಿದ ಮನೆಯ ಅಕ್ರಮ ಭಾಗವನ್ನು ಧ್ವಂಸಗೊಳಿಸಲಾಗಿದೆ. ಆದರೆ ಸರ್ಕಾರದ ಈ ಕ್ರಮವನ್ನು ಮಧ್ಯ ಪ್ರದೇಶದ ಬ್ರಾಹ್ಮಣ ಸಮುದಾಯ ವಿರೋಧಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com