2,000 ರೂ. ನೋಟು ವಿನಿಮಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಯಾವುದೇ ಮನವಿ ಪತ್ರ ಅಥವಾ ಗುರುತಿನ ಚೀಟಿ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿದ ಆರ್‌ಬಿಐ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...
2000 ರೂಪಾಯಿ ನೋಟ್
2000 ರೂಪಾಯಿ ನೋಟ್

ನವದೆಹಲಿ: ಯಾವುದೇ ಮನವಿ ಪತ್ರ ಅಥವಾ ಗುರುತಿನ ಚೀಟಿ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿದ ಆರ್‌ಬಿಐ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

"ಇದು ಕಾರ್ಯನಿರ್ವಾಹಕ ನೀತಿ ನಿರ್ಧಾರದ ವಿಷಯ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯಾವುದೇ ಮನವಿ ಪತ್ರ ಮತ್ತು ಗುರುತಿನ ದಾಖಲೆ ಇಲ್ಲದೆ 2,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿ ಆರ್ ಬಿಐ ಹೊರಡಿಸಿದ್ದ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೇ 29 ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com