ಕುನೋ ರಾಷ್ಟ್ರೀಯ ಉದ್ಯಾನ: ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ  ಆಫ್ರಿಕಾದ  ಚಿರತೆ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕುನೋ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ  ಆಫ್ರಿಕಾದ  ಚಿರತೆ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೇಜಸ್ ಎಂಬ ಗಂಡು ಚಿರತೆಯನ್ನು ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿತ್ತು. ಸುಮಾರು ನಾಲ್ಕು ವರ್ಷದ  ಚೀತಾ ತೇಜಸ್ ಉದ್ಯಾನದಲ್ಲಿನ ಇತರ ಚಿರತೆಗಳೊಂದಿಗಿನ ಕಾದಾಟದಿಂದ ಸಾವನ್ನಪ್ಪಿರಬಹುದೆಂದು ಅರಣ್ಯ ವನ್ಯಜೀವಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಜೆ ಎಸ್ ಚೌಹಾಣ್ ಹೇಳಿದ್ದಾರೆ.

ಭಾರತದಲ್ಲಿ ನಶಿಸಿ ಹೋಗಿದ್ದ ಚೀತಾಗಳನ್ನು ಮತ್ತೆ ಬೆಳೆಸುವ ಮಹತ್ವಾಕಾಂಕ್ಷಿ ಚೀತಾ ಮರು ಪರಿಚಯ ಯೋಜನೆ ಭಾಗವಾಗಿ ದಕ್ಷಿಣ ಆಫ್ರಿಕಾದಿಂದ ತರಲಾದ  ಚಿರತೆ ಕಾದಾಟದ ಸಂದರ್ಭದಲ್ಲಿ ಆವರಣದಲ್ಲಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com