
ನಾಸಿಕ್: ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ ಹೇಳಿದ್ದಾರೆ.
ಪ್ರಮುಖ ಹಣಕಾಸು ಮತ್ತು ಯೋಜನಾ ಖಾತೆಯನ್ನು ಪಡೆದುಕೊಂಡಿರುವ ಶರದ್ ಪವಾರ್ ಅವರು, ಜುಲೈ 2 ರಂದು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ನಾನು ಮತ್ತು ಇತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಚಿವರು ಖಾತೆಗಳ ಹಂಚಿಕೆಯಿಂದ ಸಂತೋಷವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಪವಾರ್, "ನಾನು ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ಸಭೆಯಲ್ಲಿ, ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಅವರೊಂದಿಗೆ ಚರ್ಚಿಸುತ್ತೇನೆ. (ಎನ್‌ಸಿಪಿ ನಾಯಕ) ಪ್ರಫುಲ್ ಪಟೇಲ್ ಮತ್ತು ನಾನು ಎನ್‌ಡಿಎ ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ಹೇಳಿದ್ದಾರೆ.
ಮಹಾ ಸಿಎಂ ಶಿಂಧೆ ಬಣ ಹಣಕಾಸು ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲದ ಕಾರಣ, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸೂಚಿಸಲಾಗಿದೆ ಎಂದು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ನಾಯಕ, "ನನಗೆ ಗೊತ್ತಿಲ್ಲ ಅನವಶ್ಯಕವಾಗಿ ವಾತಾವರಣವನ್ನು ಕೆಡಿಸುವ ಪ್ರಯತ್ನ ಇದಾಗಿದೆ. ಪೋರ್ಟ್‌ಫೋಲಿಯೋ ಹಂಚಿಕೆಯಿಂದ ನಮಗೆ ಸಂತೋಷವಾಗಿದೆ" ಎಂದಿದ್ದಾರೆ.
Advertisement