ರಾಂಪುರ: ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಮೊಹಮ್ಮದ್ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದು ಸಮಾಜವಾದಿ ಪಾರ್ಟಿಗೆ ಮತ್ತೊಂದು ಹಿನ್ನಡೆ ಎಂದೇ ಪರಿಗಣಿಸಲಾಗುತ್ತಿದೆ.
2019 ರ ಲೋಕಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮಾಡಿದ ಹೇಳಿಕೆಗಾಗಿ ಸಂಸದ/ಶಾಸಕ ನ್ಯಾಯಾಲಯವು ಅಜಂ ಖಾನ್‌ಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ರಾಂಪುರದ ಧನೋರಾದಲ್ಲಿ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅಜಂ ಖಾನ್ ಈ ಹೇಳಿಕೆ ನೀಡಿದ್ದರು. ದ್ವೇಷ ಭಾಷಣ ಪ್ರಕರಣದಲ್ಲಿ ಖಾನ್ ವಿರುದ್ಧ ರಾಂಪುರದ ಶಹಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಾಧ್ಯಮ ವರದಿಗಳ ಪ್ರಕಾರ, 2019ರ ಆರಂಭದಲ್ಲಿ ದ್ವೇಷ ಭಾಷಣದ ಮತ್ತೊಂದು ಪ್ರಕರಣದಲ್ಲಿ ಅಜಂ ಖಾನ್ ಶಿಕ್ಷೆಗೊಳಗಾದರು. 2022ರ ಅಕ್ಟೋಬರ್ 17ರಂದು MP-MLA ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಎರಡು ದಿನಗಳ ನಂತರ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಯಿತು.
ರಾಂಪುರ ನ್ಯಾಯಾಲಯವು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಯಿತು. ನಂತರ ಖಾನ್ ಅವರು ರಾಂಪುರ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಂಸದ/ಶಾಸಕ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯವು ಅವರ ವಿರುದ್ಧ ಹೊರಿಸಲಾದ ಆರೋಪಗಳಲ್ಲಿ ನಿರಪರಾಧಿ ಎಂದು ಘೋಷಿಸಿತು.
Advertisement