
ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸ್ ಅಧಿಕಾರಿಗಳು ಜಲ ಫಿರಂಗಿ ಪ್ರಯೋಗಿಸಿದ ಪರಿಣಾಮ, ಕಾಂಗ್ರೆಸ್ ನ ಹಲವು ಕಾರ್ಯಕರ್ತರು ಹಾಗೂ ನಾಯಕರು ಗಾಯಗೊಂಡಿದ್ದಾರೆ.
ಭೋಪಾಲ್ ನ ನೂತನ ಜಿಲ್ಲಾ ಅಧ್ಯಕ್ಷ ಮೋನು ಸಕ್ಸೇನಾ, ಮಹಿಳಾ ಕಾರ್ಯಕರ್ತೆ ಮಹಾಕ್ ರಾಣ ತೀವ್ರವಾಗಿ ಗಾಯಗೊಂಡಿರುವ ಕಾಂಗ್ರೆಸ್ ನಾಯಕರಾಗಿದ್ದಾರೆ.
ಸುಮಾರು 200 ಕ್ಕೂ ಹೆಚ್ಚು ಕಾಂಗ್ರೆಸ್ ನ ಕಾರ್ಯಕರ್ತರು ಹಗರಣವನ್ನು ವಿರೋಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ಕೈಗೊಂಡಿದ್ದರು. ಈ ವೇಳೆ ಬಂಗಾಂಗ ಕ್ರಾಸಿಂಗ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದಾಟಿ ಮುಂದೆ ಹೋಗಲು ಪ್ರತಿಭಟನಾ ನಿರತರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ದಾಟಿ, ಅದರ ಮೇಲೇರಿದ ಹಿನ್ನೆಲೆಯಲ್ಲಿ ಪೊಲೀಸರು ಜಲ ಫಿರಂಗಿಯನ್ನು ಪ್ರಯೋಗಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ.
Advertisement