ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಜಿ 20 ಸಭೆ
ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.
Published: 16th July 2023 04:03 PM | Last Updated: 16th July 2023 04:51 PM | A+A A-

ಬೆಂಗಳೂರಿನಲ್ಲಿ ಜಿ20 ಹಣಕಾಸು ಸಚಿವರ ಸಭೆಯಲ್ಲಿ ನಿರ್ಮಲಾ ಸೀತಾರಾಮನ್
ನವದೆಹಲಿ: ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.
ಈ ಸಭೆ ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯುರೋಪಿಯನ್ ಕಮಿಷನ್ ಮತ್ತು ಏಷ್ಯನ್ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ (ಎಐಐವಿ) ಮತ್ತಿತರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಜೊತೆಗೆ ಹೂಡಿಕೆದಾರರ ದುಂಡು ಮೇಜನ ಸಭೆ, ತೆರಿಗೆ ವಿಚಾರ ಸಂಕಿರಣದಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.
ಜಾಗತಿಕ ಆರ್ಥಿಕತೆ ಮತ್ತು ಅಂತರರಾಷ್ಟ್ರೀಯ ಹಣಕಾಸು ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಜಂಟಿಯಾಗಿ ಮೂರನೇ ಜಿ-20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
#WATCH | Both, India and Indonesia, are fast-growing economies and are similar in many ways. Both are active members of multilateral organisations such as the G-20, WTO, and East Asia Summit. India has taken over G20 Presidency from Indonesia, and there are several legacy issues… pic.twitter.com/2nCglGttTh
— ANI (@ANI) July 16, 2023
ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ವೀಕರಿಸಿದ ಆದೇಶದ ಆಧಾರದ ಮೇಲೆ ವಿವಿಧ ಕೆಲಸದ ಗುರಿ ಸಾಧಿಸಲು ಮೂರನೇ ಜಿ-20 ಮೂರನೇ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಕಳೆದ ವಾರ ಹೇಳಿದ್ದರು.