ಲೋಕಸಭಾ ಚುನಾವಣೆ: ಬಿಎಸ್‌ಪಿ ಏಕಾಂಗಿ ಹೋರಾಟ, ಎನ್‌ಡಿಎ; INDIA ಒಕ್ಕೂಟಗಳು ದಲಿತ ವಿರೋಧಿ ಎಂದ ಮಾಯಾವತಿ

2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ.
ಮಾಯಾವತಿ
ಮಾಯಾವತಿ
Updated on

ನವದೆಹಲಿ: 2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಥವಾ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಒಕ್ಕೂಟ 'ಇಂಡಿಯಾ'ದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲದಿದ್ದರೆ, ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಎಸ್‌ಪಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಎನ್‌ಡಿಎ ಮತ್ತು ಹೊಸದಾಗಿ ರಚನೆಯಾದ ಪ್ರತಿಪಕ್ಷಗಳ ಒಕ್ಕೂಟ INDIA ಅನ್ನು ಟೀಕಿಸಿದರು. ಇವೆರಡೂ ದಲಿತರು ಮತ್ತು ದಮನಿತ ವರ್ಗಗಳ ಪರವಾಗಿ ಕೆಲಸ ಮಾಡಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಭರವಸೆಗಳನ್ನು ಮರೆಯುತ್ತಾರೆ ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟವು ತಮ್ಮನ್ನು ತಾವು ಬಲಪಡಿಸಿಕೊಳ್ಳುತ್ತಿವೆ. ಹೀಗಿರುವಾಗ, ಬಿಎಸ್‌ಪಿ ದೇಶದಾದ್ಯಂತ ಗೌಪ್ಯವಾಗಿ ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಿದೆ ಎಂದು ಮಾಯಾವತಿ ಹೇಳಿದರು.

'ಕಾಂಗ್ರೆಸ್ ಜಾತಿವಾದಿ ಮನಸ್ಥಿತಿಯನ್ನು ಅಳವಡಿಸಿಕೊಂಡಿರುವುದರಿಂದ ಮತ್ತು ಅವರ ಬೇಡಿಕೆಗಳನ್ನು ಕಡೆಗಣಿಸಿರುವುದರಿಂದ ತುಳಿತಕ್ಕೊಳಗಾದ ವರ್ಗಗಳು ಬಿಎಸ್‌ಪಿಯನ್ನು ಬೆಂಬಲಿಸಬೇಕಾಗಿದೆ. ಕಾಂಗ್ರೆಸ್ ತನ್ನ ಜಾತಿವಾದಿ ಮತ್ತು ಬಂಡವಾಳಶಾಹಿ ಮನಸ್ಥಿತಿಯನ್ನು ಬದಿಗಿಟ್ಟು, ಬಡವರು ಮತ್ತು ಶೋಷಿತರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದರೆ, ಬಿಆರ್ ಅಂಬೇಡ್ಕರ್ ಅವರ ಮಾತನ್ನು ಆಲಿಸಿದ್ದರೆ, ಬಿಎಸ್‌ಪಿ ರಚಿಸುವ ಅಗತ್ಯವೇ ಉದ್ಭವಿಸುತ್ತಿರಲಿಲ್ಲ' ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ್ದ ಪ್ರತಿಪಕ್ಷಗಳು ತಮ್ಮ ಒಕ್ಕೂಟಕ್ಕೆ 'ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ (INDIA)' ಎಂದು ಹೆಸರಿಟ್ಟಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸವಾಲು ಹಾಕಿವೆ.
ಇದರೊಂದಿಗೆ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ದ ಹೋರಾಡಲು 11 ಸದಸ್ಯರ ಸಮನ್ವಯ ಸಮಿತಿ ಮತ್ತು ಜಂಟಿ ಕಾರ್ಯಾಲಯವನ್ನು ಸ್ಥಾಪಿಸಲು ಸಭೆ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com