ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್'ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕುಪ್ವಾರ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್'ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

ಭಾರತೀಯ ಸೇನೆ, ಬಿಎಸ್‌ಎಫ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ನಡೆಸಿದ  ಜಂಟಿ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ದಿಟ್ಟ ಉತ್ತರ ನೀಡಿದ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಎಂದು ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com