ನಟ ವಿವೇಕ್ ಒಬೆರಾಯ್ ಗೆ 1.55 ಕೋಟಿ ರೂ. ವಂಚನೆ; ಮೂವರ ವಿರುದ್ಧ ಕೇಸ್ ದಾಖಲು
ಮುಂಬೈ: ಮೂವರು ವ್ಯಕ್ತಿಗಳು ತನಗೆ 1.55 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈವೆಂಟ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಹೂಡಿಕೆ ಮಾಡಿ, ಅದರಿಂದ ಉತ್ತಮ ಆದಾಯ ನೀಡುವ ಭರವಸೆ ನೀಡಿ ವಿವೇಕ್ ಒಬೆರಾಯ್ ಅವರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಟನ ಚಾರ್ಟರ್ಡ್ ಅಕೌಂಟೆಂಟ್, ಮೂವರ ವಿರುದ್ಧ ಅಂಧೇರಿ ಪೂರ್ವದ ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಚಲನಚಿತ್ರ ನಿರ್ಮಾಪಕ ಸೇರಿದಂತೆ ಮೂವರು ಆರೋಪಿಗಳು ನಟನ ವ್ಯಾಪಾರ ಪಾಲುದಾರರಾಗಿದ್ದು, ಈವೆಂಟ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಹಣ ಹೂಡುವಂತೆ ಕೇಳಿದ್ದರು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯಲ್ಲಿ ನಟ 1.55 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ನಟನ ಪತ್ನಿ ಕೂಡ ಸಂಸ್ಥೆಯಲ್ಲಿ ಪಾಲುದಾರರಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿದ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ