ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ
ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
Published: 22nd July 2023 05:18 PM | Last Updated: 22nd July 2023 05:18 PM | A+A A-

ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ ಮರೆಯಬೇಡಿ: ಬಿಜೆಪಿ
ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.
.@narendramodi ji,
— Mallikarjun Kharge (@kharge) July 21, 2023
You did not make a statement inside the Parliament, yesterday.
If you were angry then instead of making false equivalence with Congress governed states, you could have first dismissed your Chief Minster of Manipur.
INDIA expects you to make an elaborate…
ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ.
ಇದನ್ನೂ ಓದಿ: ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ: ವಿಡಿಯೋ ವೈರಲ್
ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, 'ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ. ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.