ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ: ವಿಡಿಯೋ ವೈರಲ್

ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.
ವೈರಲ್ ಆಗಿರುವ ವಿಡಿಯೋ.
ವೈರಲ್ ಆಗಿರುವ ವಿಡಿಯೋ.

ಮಾಲ್ಡಾ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೂರ್ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಾಲ್ಡಾದ ಪಕುವಾಹತ್‌ನಲ್ಲಿ ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ. ಮಹಿಳೆಯರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಂಡು ಬಂದಿದೆ. ಈ ಕುರಿತು ಪಶ್ಚಿಮ ಬಂಗಾಳ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆಯ ವಿಡಿಯೋವನ್ನು ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಮಾಲವಿಯ ಅವರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭೀಕರತೆ ಮುಂದುವರಿದಿದೆ. ಮಾಲ್ಡಾದ ಬಮಂಗೋಳ ಪೊಲೀಸ್ ಠಾಣೆಯ ಪಕುವಾ ಹ್ಯಾಟ್ ಪ್ರದೇಶದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಚಿತ್ರಹಿಂಸೆ ನೀಡಿ ನಿರ್ದಯವಾಗಿ ಥಳಿಸಲಾಯಿತು, ಸ್ಥಳದಲ್ಲಿ ಪೊಲೀಸರು ಇದ್ದರೂ ಮೂಕ ಪ್ರೇಕ್ಷಕರಾಗಿರುವುದು ಕಂಡು ಬಂದಿದೆ.

ಜುಲೈ 19 ರಂದು ಬೆಳಿಗ್ಗೆ ಈ ಭಯಾನಕ ಘಟನೆ ನಡೆದಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿದ ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಕೇವಲ ಆಕ್ರೋಶದ ಹೊರಹಾಕುವ ಬದಲು ಬಂಗಾಳದ ಗೃಹ ಮಂತ್ರಿಯಾಗಿರುವುದರಿಂದ ಕಠಿಣ ಕ್ರಮ ಕೈಗೊಳ್ಳಬಹುದಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಅನಾಗರೀಕ ವರ್ತನೆಯನ್ನು ಅವರ ಖಂಡಿಸಲಿಲ್ಲ. ನೋವು ಮತ್ತು ಸಂವೇದನೆಯನ್ನು ವ್ಯಕ್ತಪಡಿಸಲಿಲ್ಲ. ಇದು ಅವರ ವೈಫಲ್ಯವನ್ನು ಬಹಿರಂಗಪಡಿಸುತ್ತದೆ. ರಾಜಕೀಯ ಲಾಭಕ್ಕಾಗಿ ಕಣ್ಣೀರು ಸುರಿಸಿದ್ದಾರೆಂದು ಮಾಲವಿಯ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com