ಜಾರ್ಖಂಡ್: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ, ಆನ್‌ಲೈನ್‌ನಲ್ಲಿ ಶೇರ್ ಮಾಡಿದ್ದ ಶಿಕ್ಷಕನ ಬಂಧನ
9ನೇ ತರಗತಿ ವಿದ್ಯಾರ್ಥಿಯ ಅಶ್ಲೀಲ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ 28 ವರ್ಷದ ಶಿಕ್ಷಕನನ್ನು ಸೋಮವಾರ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು...
Published: 24th July 2023 07:00 PM | Last Updated: 24th July 2023 08:30 PM | A+A A-

ಸಾಂದರ್ಭಿಕ ಚಿತ್ರ
ಧನ್ಬಾದ್: 9ನೇ ತರಗತಿ ವಿದ್ಯಾರ್ಥಿಯ ಅಶ್ಲೀಲ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ 28 ವರ್ಷದ ಶಿಕ್ಷಕನನ್ನು ಸೋಮವಾರ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತರಗತಿಯ ನಂತರ ತನ್ನ ಕೋಚಿಂಗ್ ಸೆಂಟರ್‌ಗೆ ಕರೆಯಿಸಿಕೊಳ್ಳುತ್ತಿದ್ದ ಶಿಕ್ಷಕ, ವಿದ್ಯಾರ್ಥಿನಿಯೊಂದಿಗೆ 'ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ' ತೊಡಗುತ್ತಿದ್ದನು ಮತ್ತು ಅದನ್ನು ವಿಡಿಯೋ ಮಾಡಿ, ಅವುಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕುವ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ಇದನ್ನು ಓದಿ: ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ಭಾನುವಾರ, ಶಿಕ್ಷಕ ಆ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.
ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಾಲಕಿ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಧನ್ಸಾರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ರಾಜದೇವ್ ಸಿಂಗ್ ಹೇಳಿದ್ದಾರೆ.
ವಿದ್ಯಾರ್ಥಿನಿ ಕಳೆದ ಒಂದು ವರ್ಷದಿಂದ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.