ಸತ್ಯೇಂದ್ರ ಜೈನ್
ಸತ್ಯೇಂದ್ರ ಜೈನ್

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ಐದು ವಾರ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಐದು ವಾರಗಳ ಕಾಲ ವಿಸ್ತರಿಸಿದೆ.
Published on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಐದು ವಾರಗಳ ಕಾಲ ವಿಸ್ತರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಜೈನ್‌ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಜುಲೈ 24 ರವರೆಗೆ ವಿಸ್ತರಿಸಿತ್ತು. ಅವರ ಜಾಮೀನು ಅವಧಿ ಇಂದು ಅತ್ಯವಾಗಿತ್ತು.

ಜೈನ್ ಅವರು ಜುಲೈ 21 ರಂದು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠಕ್ಕೆ ತಿಳಿಸಿದರು.

ಈ ವೇಳೆ ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ಮಧ್ಯಂತರ ಜಾಮೀನು ವಿಸ್ತರಣೆಗೆ ತಮ್ಮ ವಿರೋಧವಿಲ್ಲ ಎಂದು ಹೇಳಿದರು. ಹೀಗಾಗಿ ಜೈನ್ ಪರ ವಕೀಲರ ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನು ಅವಧಿಯನ್ನು ಐದು ವಾರ ವಿಸ್ತರಿಸಿ, ವಿಚಾರಣೆ ಮುಂದೂಡಿದೆ.

ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್​, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಆಯ್ಕೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ಅವರಿಗೆ ಇದೆ ಎಂದು ಹೇಳಿತ್ತು.

ಕಳೆದ ವರ್ಷ ಮೇ 30 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರನ್ನು ಬಂಧನಕ್ಕೊಳಪಡಿಸಿತ್ತು. ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com