ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 7ನೇ ಆರೋಪಿ ಬಂಧನ

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಈ ವರೆಗೂ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ತೌಬಲ್ ಜಿಲ್ಲೆಯಲ್ಲಿ ಮತ್ತೋರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ 7 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ–ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com