ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಗೂ ಮುನ್ನ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಮುಂಗಾರು ಅಧಿವೇಶನದ ಮೊದಲ ದಿನದಿಂದ ಉಭಯ ಸದನಗಳಲ್ಲಿ ಕಲಾಪಕ್ಕೆ ಅಡ್ಡಿಯುಂಟಾಗಿದೆ.

ಇಂದು ಲೋಕಸಭೆಯಲ್ಲಿ ಬಹು-ರಾಜ್ಯ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆ ಮೇಲಿನ ಕಿರು ಚರ್ಚೆ ವೇಳೆ ಉತ್ತರಿಸಿದ ಅಮಿತ್ ಶಾ, ಸರ್ಕಾರ ಮುಚ್ಚಿಡುವಂತಹದ್ದು ಏನೂ ಇಲ್ಲ ಮತ್ತು ಮಣಿಪುರ ಸಮಸ್ಯೆಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ. ಈ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯ ಪ್ರತಿಪಕ್ಷಗಳ ನಾಯಕರಿಗೆ ತಾವು ಪತ್ರ ಬರೆದಿರುವುದಾಗಿ ತಿಳಿಸಿದರು.

"ಘೋಷಣೆಗಳನ್ನು ಕೂಗುವ ಜನ ಸಹಕಾರ ನೀಡುವುದರಲ್ಲಿ ಅಥವಾ ಸಹಕಾರಿಗಳಲ್ಲಿ ಆಸಕ್ತಿ ಹೊಂದಿಲ್ಲ. ದಲಿತರು ಅಥವಾ ಮಹಿಳಾ ಕಲ್ಯಾಣದಲ್ಲಿ ಆಸಕ್ತಿ ಹೊಂದಿಲ್ಲ" ಎಂದು ಅಮಿತ್ ಶಾ ಅಅವರು ವಿರೋಧ ಪಕ್ಷಗಳ ಸದಸ್ಯರ ಘೋಷಣೆಗಳ ನಡುವೆ ವಾಗ್ದಾಳಿ ನಡೆಸಿದರು.

"ಮಣಿಪುರದ ಬಗ್ಗೆ ಎಷ್ಟು ಸಮಯವರೆಗೆ ಬೇಕಾದರೂ ಚರ್ಚೆಗೆ ನಾವು(ಸರ್ಕಾರ) ಸಿದ್ಧರಿದ್ದೇವೆ ಎಂದು ನಾನು ಉಭಯ ಸದನಗಳ ವಿರೋಧ ಪಕ್ಷದ ನಾಯಕರಿಗೆ ಪತ್ರ ಬರೆದಿದ್ದೇನೆ ಮತ್ತು ಇದನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ. ಸರ್ಕಾರ ಯಾವುದಕ್ಕೂ ಹೆದರುವುದಿಲ್ಲ. ಮಣಿಪುರ ವಿಷಯದ ಬಗ್ಗೆ ಚರ್ಚೆ ಮಾಡಲು ಬಯಸುವವರು ಚರ್ಚೆ ಮಾಡಬಹುದು. ನಾವು ಮುಚ್ಚಿಡುವಂತಹದ್ದು ಏನೂ ಇಲ್ಲ" ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com