ಅವರು 'INDIA' ಹೆಸರು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ: ಮೋದಿಗೆ ಮಮತಾ ಟಾಂಗ್

ಅವರು(ಮೋದಿ) 'INDIA' ಎಂಬ ಹೆಸರನ್ನು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಪ್ರತಿಪಕ್ಷಗಳ ಮೈತ್ರಿಕೂಟದ ಕುರಿತು ಪ್ರಧಾನಿ ನರೇಂದ್ರ ಮೋದಿ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಅವರು(ಮೋದಿ) 'INDIA' ಎಂಬ ಹೆಸರನ್ನು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಪ್ರತಿಪಕ್ಷಗಳ ಮೈತ್ರಿಕೂಟದ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇಂದು ರಾಜಭವನದಲ್ಲಿ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ಬಿಜೆಪಿ ಹೆಚ್ಚು ಕೆಟ್ಟದಾಗಿ ಮಾತನಾಡಿದಷ್ಟೂ ಅವರು ಅದರ ಬಗ್ಗೆ ಒಲವು ಹೊಂದಿದ್ದಾರೆ ಎಂದು ಸಾಬೀತುಪಡಿಸುತ್ತದೆ ಎಂದಿದ್ದಾರೆ.

"ನಮ್ಮ ಪ್ರಧಾನಿಗೆ ಧನ್ಯವಾದಗಳು. ಅವರು 'ಇಂಡಿಯಾ' ಹೆಸರನ್ನು ಇಷ್ಟಪಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಸಾಮಾನ್ಯ ಜನರಂತೆ ಅವರು ಸಹ ಅದನ್ನು ಒಪ್ಪಿಕೊಂಡಿದ್ದಾರೆ. ಅವರು ಆ ಹೆಸರಿನ ಬಗ್ಗೆ ಹೆಚ್ಚು ಕೆಟ್ಟದಾಗಿ ಮಾತನಾಡುತ್ತಾರೆ ಎಂದರೆ ಅದನ್ನು ಹೆಚ್ಚು ಇಷ್ಟಪಡುತ್ತಾರೆ ಎಂದೇ ಅರ್ಥ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ INDIA ದೇಶ ಕಂಡ ಅತ್ಯಂತ ದಿಕ್ಕು ತೋಚದ ಮೈತ್ರಿಕೂಟ ಎಂದು ಟೀಕಿಸಿದ್ದ ಪ್ರಧಾನಿ ಮೋದಿ, ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ ಹೆಸರುಗಳನ್ನು ಉಲ್ಲೇಖಿಸಿ, ಕೇವಲ ದೇಶದ ಹೆಸರು ಬಳಸುವುದರಿಂದ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com